
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಬೆಂಗಳೂರು ಕಾಂಪ್ಲೆಕ್ಸ್ನಲ್ಲಿ ಒಟ್ಟು 14 ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಬಯಸುವವರು ಬಿ.ಇ., ಬಿ.ಟೆಕ್ ಅಥವಾ ಬಿ.ಎಸ್ಸಿ ಇಂಜಿನಿಯರಿಂಗ್ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಕ್ಟೋಬರ್ 23ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಆರಂಭಿಕ ಮಾಸಿಕ ವೇತನ 50,000 ರೂ. ಇರುತ್ತದೆ.