
ಎಂಎಸ್ಎಂಇ ವ್ಯವಸ್ಥಾಪಕ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗುರುವಾರ ಬೆಳಗ್ಗೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅವರು ದೆಹಲಿಗೆ ತೆರಳಲು ವಿಮಾನ ಟಿಕೆಟ್ ಬುಕ್ ಮಾಡಿದ್ದರೂ ವಿಮಾನ ಏರಿರುವ ಬಗ್ಗೆ ಮಾಹಿತಿ ಇಲ್ಲ, ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು ಕುಟುಂಬದವರ ಸಂಪರ್ಕಕ್ಕೂ ಸಿಗುತ್ತಿಲ್ಲ.
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ತನಿಖೆಯ ಭಾಗವಾಗಿ ಇಡಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ ಮರುದಿನವೇ ಅಧಿಕಾರಿ ನಾಪತ್ತೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.