
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿಯು ನವದೆಹಲಿಯ ಜಂತರ್ ಮಂತರ್ನಲ್ಲಿ ಶುಕ್ರವಾರ ಪ್ರತಿಭಟನಾ ಸಮಾವೇಶ ಆಯೋಜಿಸಿತ್ತು.
ಪ್ರತಿಭಟನಾಕಾರರು ಚುನಾವಣಾ ಆಯೋಗದ ಕಚೇರಿಯತ್ತ ಮೆರವಣಿಗೆ ಸಾಗಲು ಯತ್ನಿಸಿದಾಗ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತೀವ್ರ ತಳ್ಳಾಟ-ನೂಕಾಟ ನಡೆಯಿತು.
ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಸಂಸದ ಸಂಜಯ್ ಸಿಂಗ್, ಸಚಿವ ಸೌರಭ್ ಭಾರದ್ವಾಜ್, ನಾಯಕಿ ಆತಿಶಿ ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.