
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಅತಿ ತೀವ್ರ ಚಂಡಮಾರುತ ಅರ್ನಾಬ್ ಪ್ರಭಾವದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿರುವ ವಾಯುಭಾರ ಕುಸಿತವು ಪಶ್ಚಿಮ-ವಾಯುವ್ಯ ದಿಕ್ಕಿನತ್ತ ಚಲಿಸಿ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ನಿರೀಕ್ಷೆಯಿದೆ.
ಈ ಚಂಡಮಾರುತವು ನವೆಂಬರ್ 2ರ ಸಂಜೆಯ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪವಿರುವ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯನ್ನು ತಲುಪಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.