
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಆಗಸ್ಟ್ 13ಕ್ಕೆ ನಿಗದಿಪಡಿಸಿದೆ.
ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳು ಮೇಕೆದಾಟು ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಅದೇ ದಿನ ಕರ್ನಾಟಕ ಬಂದ್ ಘೋಷಿಸಿವೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವುದರಿಂದ ಬಂದ್ ನಡೆಸುವ ಕುರಿತು ಸಂಘಟನೆಗಳಲ್ಲಿ ಒಮ್ಮತದ ಕೊರತೆ ಇದ್ದು, ಅಂತಿಮ ನಿರ್ಧಾರದ ಬಗ್ಗೆ ಗೊಂದಲ ಮುಂದುವರಿದಿದೆ.