
ಉತ್ತರ ಕನ್ನಡ ಜಿಲ್ಲೆಯಲ್ಲಿ ಹರಿಯುವ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಹಾಗೂ ತಿರುವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರಗಳು ಮುಂದಾಗಿವೆ.
ಪಶ್ಚಿಮ ಘಟ್ಟದ ಈ ನದಿ ತಿರುವು ಯೋಜನೆಯು ಪರಿಸರ ಮತ್ತು ಜನಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ವಿನಾಶಕಾರಿ ಯೋಜನೆಯನ್ನು ವಿರೋಧಿಸಿ ಅಕ್ಟೋಬರ್ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.