
ಉತ್ತರ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸ್ವಯಂಪ್ರೇರಿತ ನಿವೃತ್ತಿ ಪಡೆದ ದಿವ್ಯಾ ಮಿತ್ತಲ್ ಅಕ್ಟೋಬರ್ 15ರ ಗುರುವಾರ 'ಜನ್ ನೀತಿ ಭಾರತ್' ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿರುವ ಅವರು, ನೀತಿ ನಿರೂಪಣೆಯಲ್ಲಿ ಜನರನ್ನು ಕೇಂದ್ರಬಿಂದುವನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಮಿರ್ಜಾಪುರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಲ ಪೂಜನ್ ಆಮಂತ್ರಣ ಪತ್ರದಲ್ಲಿ ಸ್ಥಳೀಯ ಬಿಜೆಪಿ ನಾಯಕರ ಹೆಸರು ಹಾಕಿಲ್ಲ ಎಂಬ ಕಾರಣಕ್ಕೆ ದಿಢೀರ್ ವರ್ಗಾವಣೆಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.