
ಝಿಂಬಾಬ್ವೆ ವಿರುದ್ಧದ ಸರಣಿಯನ್ನು 3-0 ಅಂತರದಿಂದ ಗೆಲ್ಲುವ ಮೂಲಕ, ಟೀಮ್ ಇಂಡಿಯಾ ಕನಿಷ್ಠ 3 ಪಂದ್ಯಗಳ ಟಿ20 ಸರಣಿಯಲ್ಲಿ 12 ಬಾರಿ ಕ್ಲೀನ್ ಸ್ವೀಪ್ ಮಾಡಿದ ವಿಶ್ವದ ಏಕೈಕ ತಂಡವಾಗಿದೆ.
ಭಾರತದ ಈ 12 ವೈಟ್‌ವಾಶ್ ಗೆಲುವುಗಳಲ್ಲಿ ಮಾಜಿ ನಾಯಕ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ 6 ಬಾರಿ, ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ತಲಾ 2 ಬಾರಿ ಗೆಲುವು ಸಾಧಿಸಿದ್ದಾರೆ.
ಈ ಪಟ್ಟಿಯಲ್ಲಿ ಪಾಕಿಸ್ತಾನ್ 8 ಬಾರಿ ಮತ್ತು ಇಂಗ್ಲೆಂಡ್ 5 ಬಾರಿ ಕ್ಲೀನ್ ಸ್ವೀಪ್ ಸಾಧಿಸಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.