
ಬೆಳಗಾವಿ ನಗರದ ಚವ್ಹಾಟ ಗಲ್ಲಿಯಲ್ಲಿ ಗಣೇಶ ಹಬ್ಬದ ರಾತ್ರಿ ಸಂಭವಿಸಿದ ಫ್ರಿಡ್ಜ್ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಜಾನನ ದಮೋನೆ ಹಾಗೂ ರೋಷನ್ ದಮೋನೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ದುರಂತದಲ್ಲಿ ಈಗಾಗಲೇ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಪ್ರಸ್ತುತ ತಂದೆ-ಮಗ ಕೂಡ ಸಾವನ್ನಪ್ಪಿರುವುದರಿಂದ ಇಡೀ ಕುಟುಂಬವೇ ದುರಂತ ಅಂತ್ಯಕಂಡಂತಾಗಿದೆ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 14ರ ಸೋಮವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಫ್ರಿಡ್ಜ್ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ತಕ್ಷಣವೇ ಸ್ಪಂದಿಸಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.