
ನಟ ಧನಂಜಯ್ ಅಭಿನಯದ ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಡಿಸೆಂಬರ್ 24ರಂದು ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜಾದಿನಗಳ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ತೆರೆಕಾಣಲಿದೆ.
‘ಬಡವ ರಾಸ್ಕಲ್’ ಚಿತ್ರದ ನಿರ್ದೇಶಕ ಶಂಕರ್ ಗುರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ನಟ ಲೂಸ್ ಮಾದ ಯೋಗಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ವಾಸುಕಿ ವೈಭವ್ ಸಂಗೀತ ನಿರ್ದೇಶನವಿರುವ ಈ ಚಿತ್ರದಲ್ಲಿ ರೀಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದು, ಐರಾ ಫಿಲ್ಮ್ಸ್ ಹಾಗೂ ರಾಯಲ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದೆ.