
ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಮನೌರಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 11 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಸುಮಾರು 25 ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, 8ರಿಂದ 10 ಜೆಸಿಬಿ ಯಂತ್ರಗಳನ್ನು ಬಳಸಿ ಕಳೆದ 4 ಗಂಟೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸ್ಫೋಟದ ತೀವ್ರತೆಗೆ 50 ಮೀಟರ್ ವ್ಯಾಪ್ತಿಯಲ್ಲಿದ್ದ 5ರಿಂದ 7 ಮನೆಗಳು ಹಾನಿಗೊಳಗಾಗಿದ್ದು, ದೆಹಲಿ-ಹೌರಾ ಮಾರ್ಗದ ರೈಲು ಸಂಚಾರವನ್ನು ಒಂದು ಗಂಟೆ ಕಾಲ ಸ್ಥಗಿತಗೊಳಿಸಲಾಗಿತ್ತು.