
ಫುಕೆಟ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ AI379 ವಿಮಾನವು ಮಂಗಳವಾರ ತೀವ್ರ ಟರ್ಬುಲೆನ್ಸ್ಗೆ ಸಿಲುಕಿ ದಿಢೀರ್ 300 ಅಡಿ ಕೆಳಕ್ಕೆ ಕುಸಿದಿದೆ.
ಈ ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 12 ಮಂದಿ ಗಾಯಗೊಂಡಿದ್ದು, ವಿಮಾನವು 134 ಪ್ರಯಾಣಿಕರೊಂದಿಗೆ ದೆಹಲಿಯಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ.
ಗಾಯಗೊಂಡ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ವಿಮಾನ ನಿಲ್ದಾಣದ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಘಟನೆಯ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಏರ್ ಇಂಡಿಯಾ ತಿಳಿಸಿದೆ.