
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಯಚೂರಿನ ಲಿಂಗಸುಗೂರಿನಿಂದ ಆರಂಭವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಎರಡನೇ ದಿನ ಮಸ್ಕಿಯಿಂದ ಗುಡದೂರು ಗ್ರಾಮದವರೆಗೆ ಸುಮಾರು 21 ಕಿಲೋಮೀಟರ್ ಪಾದಯಾತ್ರೆ ನಡೆದಿದ್ದು, ವಿಜಯೇಂದ್ರ ಅವರು ದಲಿತ ಮುಖಂಡರೊಂದಿಗೆ ಸಂವಾದ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಯಾತ್ರೆ ಇನ್ನೂ ಏಳು ದಿನಗಳ ಕಾಲ ಮುಂದುವರಿಯಲಿದ್ದು, ಕಾಂಗ್ರೆಸ್ ಸರ್ಕಾರವನ್ನು ವಿಸರ್ಜಿಸುವಂತೆ ವಿಜಯೇಂದ್ರ ಸವಾಲು ಹಾಕಿದ್ದಾರೆ.