
ಒಲಿಂಪಿಕ್ಸ್ ವಿಜೇತ ಮತ್ತು ಮಾಜಿ ಹಾಕಿ ಆಟಗಾರ ಎಂ.ಎಂ. ಸೋಮಯ್ಯ ಅವರ ಬೆಂಗಳೂರಿನ ಇಂದಿರಾನಗರದ ಮನೆಯಲ್ಲಿ ಅಕ್ಟೋಬರ್ 28ರಂದು ಕಳ್ಳತನ ನಡೆದಿದೆ.
1980ರ ಮಾಸ್ಕೋ ಒಲಿಂಪಿಕ್ಸ್ ಚಿನ್ನದ ಪದಕ ಸೇರಿದಂತೆ 1982ರ ಏಷ್ಯನ್ ಗೇಮ್ಸ್ ಬೆಳ್ಳಿ, 1986ರ ಕಂಚಿನ ಪದಕ ಹಾಗೂ ಬೆಲೆಬಾಳುವ ಚಿನ್ನಾಭರಣಗಳು ಕಳವಾಗಿವೆ.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದಾರೆ.