
ಲೈಂಗಿಕ ಕಿರುಕುಳ ಪ್ರಕರಣದಿಂದ ಖುಲಾಸೆಗೊಂಡಿರುವ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್, ತಮ್ಮ ಮೇಲಿನ ಆರೋಪಗಳು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.
ಗೊಂಡಾದ ನಂದಿನಿ ನಗರ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2029ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಪುನರುಚ್ಚರಿಸಿದ್ದಾರೆ.
ಬ್ರಿಜ್ ಭೂಷಣ್ ಖುಲಾಸೆಗೊಂಡ ಬೆನ್ನಲ್ಲೇ, ವಿನೇಶ್ ಫೋಗಟ್ ಸೇರಿದಂತೆ ಆರೋಪ ಮಾಡಿದ ಕುಸ್ತಿಪಟುಗಳು ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.