
ಅಧಿಕಾರದಲ್ಲಿ ಉಳಿಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸಾಧನವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಎಸ್ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಗಿದೆ.
ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೆ ಪಕ್ಷವು ಸಂಸತ್ತಿನಲ್ಲಿ, ನ್ಯಾಯಾಲಯಗಳಲ್ಲಿ ಹಾಗೂ ಬೀದಿಗಿಳಿದು ಹೋರಾಡಲಿದೆ ಎಂದು ಸಿಡಬ್ಲ್ಯುಸಿ ನಿರ್ಣಯ ತಿಳಿಸಿದೆ.