
ಮತದಾರರ ಅರ್ಜಿ ನಮೂನೆ 7 ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಧರಣಿಯ ಫಲವಾಗಿ ಚುನಾವಣಾ ಆಯೋಗವು ತನಿಖೆಗೆ ಆದೇಶಿಸಿದೆ.
ರಾಜ್ಯದಲ್ಲಿ ಫಾರ್ಮ್ 6, 6ಎ ಹಾಗೂ 7 ಬಳಸಿ ಉದ್ದೇಶಪೂರ್ವಕವಾಗಿ ಸುಳ್ಳು ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮರಣ ಹಾಗೂ ಎರಡು ಬಾರಿ ನೋಂದಣಿ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಯಾವುದೇ ಫಾರ್ಮ್ 7 ಅನ್ನು ಅನುಮೋದನೆ ಮಾಡುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತರು ತಹಸೀಲ್ದಾರ್‌ಗಳಿಗೆ ನಿರ್ದೇಶಿಸಿದ್ದಾರೆ.