
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಇತ್ತೀಚೆಗೆ ಜೆನ್-ಜಿ ಯುವಜನರು ನಡೆಸಿದ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಯುವಜನರ ಪರವಾಗಿ ಮಾತನಾಡಿದ್ದಾರೆ.
ಮುಂಬೈನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಭಾಗವತ್, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಯು ಸರ್ವಸಮ್ಮತಿ ತಲುಪುವ ಮಾರ್ಗವಾಗಿದ್ದು, ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಜೆನ್-ಜಿ ಯುವಕರು ದೇಶವಿರೋಧಿಗಳಲ್ಲ ಎಂದು ಸ್ಪಷ್ಟಪಡಿಸಿದರು.
ಜುಲೈ 20ರಂದು ಜಂತರ್ ಮಂತರ್ನಲ್ಲಿ ಪೊಲೀಸರ ಲಾಠಿಚಾರ್ಜ್ ಎದುರಿಸಿದ್ದ ವಿದ್ಯಾರ್ಥಿಗಳ ಸಮಸ್ಯೆಗಳು ನಿಜವಾಗಿದ್ದು, ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಯ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.