
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಐಎಂಡಿ ಪ್ರಕಾರ ಈ ಜಿಲ್ಲೆಗಳಲ್ಲಿ ಗಂಟೆಗೆ 30 ಕಿ.ಮೀ ವೇಗದ ಗಾಳಿಯೊಂದಿಗೆ 65 ರಿಂದ 115 ಮಿಲಿ ಮೀಟರ್ ವರೆಗೆ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳಾದ ತುಂಗಭದ್ರಾ, ಲಿಂಗನಮಕ್ಕಿ ಮತ್ತು ಕೆ.ಆರ್.ಎಸ್ ಸೇರಿದಂತೆ ಹಲವು ಡ್ಯಾಂಗಳಿಗೆ ಒಳಹರಿವು ಹೆಚ್ಚಾಗಿದ್ದು ರೈತರಿಗೆ ಕೊಂಚ ನೆಮ್ಮದಿ ಸಿಕ್ಕಿದೆ.