
ರಾಜ್ಯದ ಫ್ಲೋರೈಡ್ ಸಮಸ್ಯೆ ಇರುವ ಗ್ರಾಮಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ, ಪ್ರತಿ ಕುಟುಂಬಕ್ಕೆ ದಿನಕ್ಕೆ 20 ಲೀಟರ್ ಶುದ್ಧ ನೀರು ಒದಗಿಸುವ ಯೋಜನೆ ರೂಪಿಸಲಾಗುತ್ತಿದೆ.
ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಮಧುಸೂದನ ಸಾಯಿ ಅವರು ತುಮಕೂರಿನಲ್ಲಿ ಈ ಮಾಹಿತಿ ನೀಡಿದ್ದು, ಫಲಾನುಭವಿಗಳಿಗೆ ಕಾರ್ಡ್ ವಿತರಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದಿದ್ದಾರೆ.
ನೇಪಾಳದ ದುರಂತದ ಹಿನ್ನೆಲೆಯಲ್ಲಿ ಹವಾಮಾನ ಬದಲಾವಣೆಯ ಬಗ್ಗೆ ಎಚ್ಚರಿಕೆ ನೀಡಿರುವ ಅವರು, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಸರ್ಕಾರಗಳಿಗೆ ಕರೆ ನೀಡಿದ್ದಾರೆ.