
ಬಿಹಾರದ ಲಖಿಸರೈ ಜಿಲ್ಲೆಯ ಅಶೋಕಧಾಮ ದೇವಾಲಯದಲ್ಲಿ ಸೋಮವಾರ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಭಕ್ತರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ.
ಶ್ರಾವಣ ಮಾಸದ ಸೋಮವಾರದಂದು ಜಲಾಭಿಷೇಕಕ್ಕೆ ಬಂದಿದ್ದ ಸಾವಿರಾರು ಭಕ್ತರ ನೂಕುನುಗ್ಗಲು ಮತ್ತು ವಿದ್ಯುತ್ ಅವಘಡದ ವದಂತಿಯಿಂದ ಈ ದುರ್ಘಟನೆ ಸಂಭವಿಸಿದೆ.
ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ನೀಡುವುದಾಗಿ ಬಿಹಾರ ಸರ್ಕಾರ ಘೋಷಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.