
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಶೇ. 62ರಷ್ಟು ಉಂಟಾಗಿದ್ದು, ಉತ್ತರ ಒಳನಾಡಿನಲ್ಲಿ ಶೇ. 84ರಷ್ಟು ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ. 64ರಷ್ಟು ಮಳೆ ಕೊರತೆಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದ್ದು, ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಸೆಪ್ಟೆಂಬರ್ 10 ಮತ್ತು 12ರ ನಂತರ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.