
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 11ರಂದು ಈಸೂರಿನಿಂದ ಶಿಕಾರಿಪುರದವರೆಗೆ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸಚಿವರು ಇದರಲ್ಲಿ ಭಾಗವಹಿಸಲಿದ್ದಾರೆ.
ವರದಿ ಜಾರಿಯಾದರೆ ಪಶ್ಚಿಮ ಘಟ್ಟ ವ್ಯಾಪ್ತಿಯ 1,576 ಗ್ರಾಮಗಳ ರೈತರ ಬದುಕು ಅತಂತ್ರವಾಗಲಿದ್ದು, ಶಿವಮೊಗ್ಗ ಜಿಲ್ಲೆಯೊಂದರಲ್ಲೇ 484 ಗ್ರಾಮಗಳ ಜನರ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.