
ವಿಜಯಪುರ ವಿಮಾನ ನಿಲ್ದಾಣದ ಪರಿಸರ ಸಂಬಂಧಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶಾಶ್ವತ ವಿನಾಯಿತಿ ನೀಡಿದ್ದು, ನಿಲ್ದಾಣದ ಕಾರ್ಯಾರಂಭಕ್ಕೆ ದಾರಿ ಸುಗಮವಾಗಿದೆ.
614 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಿಮಾನ ನಿಲ್ದಾಣವು ಮುಂದಿನ ಮೂರು ತಿಂಗಳಲ್ಲಿ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಕೇಂದ್ರ ಪರಿಸರ ಸಚಿವಾಲಯದಿಂದ ಅನುಮತಿ ಸಿಕ್ಕಿದ ಬಳಿಕ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಪರಿಶೀಲನೆ ನಡೆಸಲಿದ್ದು, ನಂತರ ವಿಮಾನ ಹಾರಾಟ ಪರೀಕ್ಷೆ ನಡೆಯಲಿದೆ.