
ರಾಮನಗರದ ಅವರಗೆರೆ ಗೇಟ್ ಬಳಿ ಶನಿವಾರ ಮುಂಜಾನೆ ಕೆಎಸ್ಆರ್ಟಿಸಿ ಬಸ್ ಸೈನ್ ಬೋರ್ಡ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಗಾಯಗೊಂಡ ಹಲವು ಪ್ರಯಾಣಿಕರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದಿಂದಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.