
ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-1 ಮತ್ತು 2ರಲ್ಲಿ ಮುಳುಗಡೆ ಸಂತ್ರಸ್ತರಿಗೆ ಹಂಚಿಕೆ ಮಾಡಿರುವ ನಿವೇಶನಗಳಲ್ಲಿ ನಡೆದಿರುವ ಅಕ್ರಮಗಳಲ್ಲಿ ಭಾಗಿಯಾಗಿರುವವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಒಬ್ಬರಿಗೆ ಎರಡೆರಡು-ಮೂರು ನಿವೇಶನ ಹಂಚಿಕೆ ಮಾಡಿರುವುದು, ನಕಲಿ ದಾಖಲೆ ಸೃಷ್ಟಿಸಿ ಅನರ್ಹರಿಗೆ ನಿವೇಶನ ನೀಡಿರುವ ಪ್ರಕರಣಗಳಲ್ಲಿ ತಪ್ಪು ಮಾಡಿದವರ ಮೇಲೆ ಎಫ್ಐಆರ್ ದಾಖಲಿಸಿ, ಸಿಐಡಿ ತನಿಖೆಯನ್ನು ವೇಗಗೊಳಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ.
ಅಕ್ಟೋಬರ್ ಅಂತ್ಯದೊಳಗೆ ತಾಂತ್ರಿಕ ಸಮಸ್ಯೆಗಳು ಇತ್ಯರ್ಥವಾಗಬೇಕು ಮತ್ತು ಮುಂದಿನ ಸಭೆಯ ವೇಳೆಗೆ ಗೊಂದಲಗಳಿಲ್ಲದೆ ಸಮಸ್ಯೆಗಳು ಬಗೆಹರಿದಿರಬೇಕು ಎಂದು ಸಚಿವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.