
ತುಮಕೂರು-ಮಧುಗಿರಿ ಮಾರ್ಗದ KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿದಾಗ ಚಾಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಪ್ರಯಾಣಿಕನ ಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ, ಬಸ್ ಅನ್ನು ತಕ್ಷಣವೇ ಹತ್ತಿರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರವೇಶದ್ವಾರದ ಮುಂದೆ ನಿಲ್ಲಿಸಿ ಚಿಕಿತ್ಸೆಗೆ ಅನುವು ಮಾಡಿಕೊಟ್ಟಿದ್ದಾರೆ.
ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕನ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.