
ನೈಸ್ ಯೋಜನೆಗಾಗಿ ರೈತರಿಂದ ಭೂಮಿ ಪಡೆದು 20 ವರ್ಷ ಕಳೆದರೂ ಹಣ ಪಾವತಿಸಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರ ಮತ್ತು ನೈಸ್ ಕಂಪನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರ ಭೂಮಿಯನ್ನು ಬ್ಯಾಂಕ್ನಲ್ಲಿ ಅಡವಿಟ್ಟು ಸಾಲ ಪಡೆದು ವ್ಯವಹಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಅವರು, ನೈಸ್ ಟೋಲ್ ಸಂಗ್ರಹ ಕಾನೂನುಬಾಹಿರ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎಂದು ನೆನಪಿಸಿದರು.
ರಾಜ್ಯ ಸರ್ಕಾರವು ನೈಸ್ ಕಂಪನಿಗೆ ಶರಣಾಗಿದ್ದು, ಇದು ಕರ್ನಾಟಕದ ನಂ.1 ಹಗರಣವಾಗಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಈ ಯೋಜನೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದ್ದಾರೆ.