
ಸುಮಾರು 6,400 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 214.43 ಕಿಲೋ ಮೀಟರ್ ಉದ್ದದ ಶಿವಮೊಗ್ಗ-ತುಮಕೂರು ರಾಷ್ಟ್ರೀಯ ಹೆದ್ದಾರಿ 69ರ ಕಾಮಗಾರಿ ಅಂತಿಮ ಹಂತ ತಲುಪಿದೆ.
ಈ ಚತುಷ್ಪಥ ಹೆದ್ದಾರಿಯ ಬಹುತೇಕ ಭಾಗಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಬಾಕಿ ಉಳಿದಿರುವ ಅಂತಿಮ ಭಾಗವು ಮಾರ್ಚ್ 2027ರ ವೇಳೆಗೆ ಪೂರ್ಣಗೊಳ್ಳಲಿದೆ.
ಈ ಹೆದ್ದಾರಿಯು ತುಮಕೂರು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಾದುಹೋಗಲಿದ್ದು, ಪ್ರಯಾಣದ ಸಮಯ ಉಳಿತಾಯ, ಕೃಷಿ ಮತ್ತು ವ್ಯಾಪಾರ ಉತ್ತೇಜನಕ್ಕೆ ಸಹಕಾರಿಯಾಗಲಿದೆ.