
ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ಹೂಡಿಕೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
2,000 ರೂ.ವರೆಗಿನ ವಹಿವಾಟುಗಳಿಗೆ ಮತ್ತು ಬೀದಿಬದಿ ವ್ಯಾಪಾರಸ್ಥರಿಗೆ ಯುಪಿಐ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದರು.
ಕೇವಲ 0.04% ಶುಲ್ಕವು ದೊಡ್ಡ ಪ್ರಮಾಣದ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಮಾತ್ರ ಅನ್ವಯಿಸಲಿದ್ದು, ಶೇ. 96ರಷ್ಟು ವಹಿವಾಟುದಾರರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.