
ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಬುಧವಾರ ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ತೆರೆಯಲಾಗಿದ್ದು, ನವೆಂಬರ್ 11ರವರೆಗೆ 14 ದಿನಗಳ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ.
ಭಕ್ತರ ಅನುಕೂಲಕ್ಕಾಗಿ 300 ರೂ. ಮತ್ತು 1,000 ರೂ.ಗಳ ಪ್ರತ್ಯೇಕ ಕ್ಯೂ ಲೈನ್ ಟಿಕೆಟ್ಗಳನ್ನು ಕಲ್ಪಿಸಲಾಗಿದ್ದು, 30 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಭಕ್ತರ ಸುಲಭ ಸಂಚಾರಕ್ಕಾಗಿ ಬೆಂಗಳೂರು-ಹಾಸನ ಹಾಗೂ ಅರಸೀಕೆರೆ-ಹಾಸನ ನಡುವೆ ವಿಶೇಷ ರೈಲುಗಳು ಮತ್ತು 200ಕ್ಕೂ ಅಧಿಕ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ಗಳನ್ನು ವ್ಯವಸ್ಥೆಗೊಳಿಸಲಾಗಿದೆ.