
ಚಿಕ್ಕಬಳ್ಳಾಪುರದ ಬಾಪೂಜಿನಗರದ ಶಬ್ಬೀರ್ ಹಾಗೂ ಉತ್ತರ ಭಾರತ ಮೂಲದ ಸಲ್ಮಾನ್ ಎಂಬಾತನನ್ನು ದೇಶದಲ್ಲಿ ವಿಧ್ವಂಸಕ ಕೃತ್ಯ ಹಾಗೂ ಭಯೋತ್ಪಾದನೆಗೆ ಸಂಚು ರೂಪಿಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಟೆಲಿಗ್ರಾಂ ಆ್ಯಪ್‌ನಲ್ಲಿ ಗ್ರೂಪ್ ಸೃಷ್ಟಿಸಿ, ಶ್ರೀಮಂತರ ಅಪಹರಣದ ಮೂಲಕ ಹಣ ಸಂಗ್ರಹಿಸಿ ದೇಶದ ಪ್ರಭಾವಿ ಮೂವರು ನಾಯಕರ ಹತ್ಯೆಗೆ ಪ್ರತಿದಿನ ಚರ್ಚಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪಶ್ಚಿಮ ಸಿಕ್ಕಿಂನ ರಿಂಬಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸಿದ್ದು, ರಸ್ತೆ ಹಾಗೂ ಆಸ್ತಪಾಸ್ತಿಗೆ ಹಾನಿಯಾಗಿದೆ.