
ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಕಾಂಗ್ರೆಸ್‌ನ ಮೂವರು ಹಿರಿಯ ಶಾಸಕರಾದ ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್ ಸೇಠ್ ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಈ ಸಭೆಯು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಂಡದಲ್ಲಿ ಭಿನ್ನಮತ ಉಂಟಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.
ಸಿದ್ದರಾಮಯ್ಯ ಅವರ ಪರಮಾಪ್ತರೆಂದು ಗುರುತಿಸಿಕೊಂಡಿರುವ ಈ ಮೂವರು ನಾಯಕರು ಸಭೆ ಸೇರಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.