
ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ಓಮ್ನಿ ಕಾರು-ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಮಹಿಳೆಯರು ಹಾಗೂ ಕೆಜಿಎಫ್ ಬಳಿ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಅಪಘಾತಗಳಲ್ಲಿ ಗಾಯಗೊಂಡವರನ್ನು ಶಿಡ್ಲಘಟ್ಟ ತಾಲೂಕು ಆಸ್ಪತ್ರೆ ಮತ್ತು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.