
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್, ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಸಿಐಡಿ ವಿಚಾರಣೆಯಲ್ಲಿ ಹೇಳಿದ್ದಾರೆ.
ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಬಸವರಾಜ್ ಕನ್ನಾಳೆ ಮೂಲಕ ಮಾರಾಟವಾಗಿದೆ ಎಂಬ ಆರೋಪವಿದೆ.
ಬೆಂಗಳೂರು, ತುಮಕೂರು ಮತ್ತು ಹೈದರಾಬಾದ್ನ ರೆಸಾರ್ಟ್ಗಳಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಿ ಬರೆಸಲಾಗಿತ್ತು ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ.