
ದಕ್ಷಿಣ ದೆಹಲಿಯ ಶಾಂತಿ ನಿಕೇತನ್ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಐದು ಮಹಡಿಯ ಪಿಜಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡ 10 ಮಂದಿಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ 15ರಿಂದ 20 ಮಂದಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಮಾಲೀಕ ಹರಿರಾಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಈ ದುರಂತದ ಕುರಿತು ಮ್ಯಾಜಿಸ್ಟ್ರಿಯಲ್ ತನಿಖೆಗೆ ಆದೇಶಿಸಿದ್ದಾರೆ.