ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಪ್ರಥಮ ತ್ರೈಮಾಸಿಕಕ್ಕೆ 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರ ₹1700 ಕೋಟಿ ಮತ್ತು ರಾಜ್ಯ ಸರ್ಕಾರ ₹1200 ಕೋಟಿ ಸೇರಿ ಒಟ್ಟು ₹2900 ಕೋಟಿ ಬಿಡುಗಡೆ ಮಾಡಿದೆ.
ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ ಎಂದು ಸಚಿವರು ಮಾಹಿತಿ ನೀಡಿದರು.