
ಕರ್ನಾಟಕ ಸರ್ಕಾರವು ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರಿಗೆ ತುಟ್ಟಿಭತ್ಯೆಯನ್ನು (DA) ಶೇ. 15.75 ರಿಂದ ಶೇ. 18ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಈ ಹೆಚ್ಚಳವು 2026ರ ಜುಲೈ 1ರಿಂದ ಪೂರ್ವಾನ್ವಯವಾಗಲಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವವರಿಗೆ ಅನ್ವಯಿಸುತ್ತದೆ.
ಹೆಚ್ಚಳದ ಬಾಕಿ ಮೊತ್ತವನ್ನು ನವೆಂಬರ್ ತಿಂಗಳ ವೇತನ ಅಥವಾ ಪಿಂಚಣಿ ಬಟವಾಡೆಗೂ ಮೊದಲು ಪಾವತಿಸಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.