
ಕೋಲ್ಕತ್ತಾದ ಮಿರ್ಜಾ ಗಾಲಿಬ್ ಬೀದಿಯಲ್ಲಿರುವ ಹೋಟೆಲ್ನಲ್ಲಿ ಬುಧವಾರ ನಸುಕಿನ 1.45ರ ಸುಮಾರಿಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಅಗ್ನಿಶಾಮಕ ಇಲಾಖೆಯು ಐದು ವಾಹನಗಳನ್ನು ಬಳಸಿ ಬೆಂಕಿಯನ್ನು ನಂದಿಸಿದ್ದು, ದಟ್ಟ ಹೊಗೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆಯುಂಟಾಯಿತು.
ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.