
ದಕ್ಷಿಣ ಆಫ್ರಿಕಾ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶದ ನಾಯಕ ತೌಹಿದ್ ಹೃದಯ್ ಅಜೇಯ 350 ರನ್ ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
481 ಎಸೆತಗಳನ್ನು ಎದುರಿಸಿದ ಹೃದಯ್ 27 ಬೌಂಡರಿ ಮತ್ತು 10 ಸಿಕ್ಸರ್‌ಗಳ ನೆರವಿನಿಂದ ವಿದೇಶಿ ನೆಲದಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಮೊದಲ ಬಾಂಗ್ಲಾ ಆಟಗಾರರಾಗಿದ್ದಾರೆ.
ಬಾಂಗ್ಲಾದೇಶ ಎ ತಂಡವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 676 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದ್ದು, ಇದರಲ್ಲಿ ಜಾಕಿರ್ ಅಲಿ 94 ಮತ್ತು ಮೊಹಮ್ಮದ್ ಸೈಫುದ್ದೀನ್ 87 ರನ್ ಗಳಿಸಿದ್ದಾರೆ.