
ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಮತ್ತು ಫೋಟೋ ಬದಲಾವಣೆಯಂತಹ ಸೇವೆಗಳಿಗೆ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿದಾರರು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸೈಬರ್ ಸೆಂಟರ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಕುಟುಂಬದ ಫೋಟೋ, ವಿಳಾಸದ ದಾಖಲೆ ಮತ್ತು ಸದಸ್ಯರ ಜನನ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.