
ಗಾಯದ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ವೇಗಿ ಜಸ್ಪ್ರೀತ್ ಬುಮ್ರಾ ಅವರು ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.
ಆಗಸ್ಟ್ 15ರಿಂದ ಗಾಲ್ನಲ್ಲಿ ಆರಂಭವಾಗಲಿರುವ ಸರಣಿಗೆ ಬುಮ್ರಾ ಬದಲಿಗೆ ಆಕಿಬ್ ನಬಿ ಅಥವಾ ಯಶ್ ಠಾಕೂರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.
ಮುಂದಿನ ವರ್ಷದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಸಿಸಿಐ ಯಾವುದೇ ರಿಸ್ಕ್ ತೆಗೆದುಕೊಳ್ಳದೆ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಿದೆ.