
ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ಭಕ್ತರಿಗೆ ಬೆದರಿಕೆ ಹಾಕಿರುವ ಪೊಲೀಸ್ ಅಧಿಕಾರಿಯ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಟಿ.ನರಸೀಪುರಕ್ಕೆ ಭೇಟಿ ನೀಡಿ ಗಣೇಶ ಮೂರ್ತಿ ಹಿಡಿದು ಪ್ರತಿಭಟಿಸಿದ ಅವರು, ಹಿಂದೂಗಳು ನೆಮ್ಮದಿಯಿಂದ ಗಣೇಶೋತ್ಸವ ಆಚರಿಸಲು ಕಾಂಗ್ರೆಸ್ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.
ಪೊಲೀಸರು ಭಕ್ತರಿಗೆ ಕಿರುಕುಳ ನೀಡಲು ಮುಂದಾದರೆ ಅವರ ಗ್ರಹಚಾರ ಬಿಡಿಸಬೇಕಾಗುತ್ತದೆ ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.