
ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಹಾಗೂ ವಿವೇಕ ಸ್ಮಾರಕವನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿನ ಈ ಆಶ್ರಮದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಘಟನೆಯ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಪ್ರಧಾನಿ ಮೋದಿ ಮತ್ತು ಸಿಎಂ ಡಿ.ಕೆ. ಶಿವಕುಮಾರ್ ಸಸಿ ನೆಟ್ಟಿದ್ದಾರೆ.
ಆಂಧ್ರಪ್ರದೇಶದಿಂದ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರು, ಈ ಕಾರ್ಯಕ್ರಮದ ಮೂಲಕ ಯುವಕರಿಗೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಸರಿಸುವ ಸಾಂಸ್ಕೃತಿಕ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ.