
ಬೆಂಗಳೂರು ಮೆಟ್ರೊ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಆಗಸ್ಟ್ 9 ರಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.
ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳ ನಡುವೆ ಮಾತ್ರ ಈ ಬದಲಾವಣೆ ಇರಲಿದ್ದು, ಉಳಿದ ಮಾರ್ಗಗಳಲ್ಲಿ ಸಂಚಾರ ಎಂದಿನಂತೆ ಇರಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಚಲ್ಲಘಟ್ಟದಿಂದ ಎಂ.ಜಿ. ರಸ್ತೆವರೆಗೆ ಹಾಗೂ ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ವರೆಗೆ ರೈಲುಗಳು ಎಂದಿನಂತೆ ಸಂಚರಿಸಲಿದ್ದು, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.