Technology
ಬೆಂಗಳೂರಿನ ಬೈಯಪ್ಪನಹಳ್ಳಿ-ಎಂ.ಜಿ. ರಸ್ತೆ ನಡುವೆ ನಾಳೆ 2 ಗಂಟೆ ಮೆಟ್ರೊ ಸ್ಥಗಿತ

ಬೆಂಗಳೂರಿನ ಬೈಯಪ್ಪನಹಳ್ಳಿ-ಎಂ.ಜಿ. ರಸ್ತೆ ನಡುವೆ ನಾಳೆ 2 ಗಂಟೆ ಮೆಟ್ರೊ ಸ್ಥಗಿತ

prajavani1h
THE BRIEF
1

ಬೆಂಗಳೂರು ಮೆಟ್ರೊ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಆಗಸ್ಟ್ 9 ರಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.

2

ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳ ನಡುವೆ ಮಾತ್ರ ಈ ಬದಲಾವಣೆ ಇರಲಿದ್ದು, ಉಳಿದ ಮಾರ್ಗಗಳಲ್ಲಿ ಸಂಚಾರ ಎಂದಿನಂತೆ ಇರಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

3

ಚಲ್ಲಘಟ್ಟದಿಂದ ಎಂ.ಜಿ. ರಸ್ತೆವರೆಗೆ ಹಾಗೂ ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್‌ವರೆಗೆ ರೈಲುಗಳು ಎಂದಿನಂತೆ ಸಂಚರಿಸಲಿದ್ದು, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.