
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳು ಹೋರಾಟ ತೀವ್ರಗೊಳಿಸಿವೆ.
ಆಗಸ್ಟ್ 24ರಂದು ಬೆಳಗ್ಗೆ 9.30ಕ್ಕೆ ಫ್ರೀಡಂಪಾರ್ಕ್‌ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನಾ ಱಲಿ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ನಾಯಕರು ಆಗಸ್ಟ್ 26ರಂದು ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಡೆಸಲಿರುವ ಪಾದಯಾತ್ರೆಯ ಮಾರ್ಗ ಮತ್ತು ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆ.