
ಉತ್ತರಾಖಂಡದ ಬೆನ್ನಲ್ಲೇ ಗುಜರಾತ್ ವಿಧಾನಸಭೆ ಅಂಗೀಕರಿಸಿದ್ದ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದು, ಈ ಕಾಯ್ದೆ ಜಾರಿಗೊಳಿಸಿದ ದೇಶದ 2ನೇ ರಾಜ್ಯವಾಗಿ ಗುಜರಾತ್ ಹೊರಹೊಮ್ಮಿದೆ.
ಮದುವೆ, ವಿಚ್ಛೇದನ, ಜೀವನಾಂಶ, ಪಿತ್ರಾರ್ಜಿತ ಆಸ್ತಿ ಹಕ್ಕು ಮತ್ತು ದತ್ತು ಸ್ವೀಕಾರ ವಿಚಾರಗಳಲ್ಲಿ ಜಾತಿ ಹಾಗೂ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಒಂದೇ ಕಾನೂನು ಚೌಕಟ್ಟು ಅನ್ವಯವಾಗಲಿದೆ.
ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಈ ಮಸೂದೆಯನ್ನು ವಿರೋಧಿಸಿದ್ದು, ಮುಸ್ಲಿಂ ವೈಯಕ್ತಿಕ ಕಾನೂನು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.