
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ನೀರು ಹರಿಸಲು ಆದೇಶಿಸಿರುವುದನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.
ಜೂನ್ 1ರಿಂದ ಸೆಪ್ಟೆಂಬರ್ 7ರವರೆಗೆ ರಾಜ್ಯದ ನಾಲ್ಕು ಜಲಾಶಯಗಳಿಗೆ 108.31 TMC ಒಳಹರಿವು ಬಂದಿದ್ದು, ಇದು 30 ವರ್ಷಗಳ ಸರಾಸರಿಗಿಂತ ಶೇ. 49.95 ರಷ್ಟು ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಜುಲೈ 29ರಿಂದ ಸೆಪ್ಟೆಂಬರ್ 7ರವರೆಗೆ ರಾಜ್ಯ ಸರ್ಕಾರವು ನಿಗದಿಗಿಂತ 2.88 TMC ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಹರಿಸಿದ್ದು, ತಕ್ಷಣವೇ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.