
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಪೆಸಿಫಿಕ್ ಮಹಾಸಾಗರದಲ್ಲಿ ಸೃಷ್ಟಿಯಾಗಿರುವ ಬೃಹತ್ ಚಂಡಮಾರುತಗಳು ಹಾಗೂ ಉತ್ತರ ಭಾರತದಿಂದ ಬೀಸುತ್ತಿರುವ ಒಣಹವೆಯಿಂದಾಗಿ ಮಳೆಯ ಚಿತ್ರಣ ಬದಲಾಗಿದೆ ಎಂದು ಇಲಾಖೆ ತಿಳಿಸಿದೆ.